ಅಹ್ಮದಾಬಾದ್,ಮಾ 18 (DaijiworldNews/HR): 2022ರ ನೊಬೆಲ್ ಶಾಂತಿ ಪ್ರಶಸ್ತಿಗೆ ಉಕ್ರೇನ್ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ನಾಮನಿರ್ದೇಶನಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಉಕ್ರೇನ್ ಜನರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನಾಮನಿರ್ದೇಶನವನ್ನು ಅನುಮತಿಸಲು ಮಾರ್ಚ್ 31, 2022 ರವರೆಗೆ ನೊಬೆಲ್ ಶಾಂತಿ ಪ್ರಶಸ್ತಿಗಾಗಿ ನಾಮನಿರ್ದೇಶನ ಪ್ರಕ್ರಿಯೆಯನ್ನು ವಿಸ್ತರಿಸಲಾಗುವುದು ಎಂದು ನೊಬೆಲ್ ಸಮಿತಿಯು ಹೇಳಿದೆ.
ಇನ್ನು ಅಕ್ಟೋಬರ್ 3 ರಿಂದ10 ರವರೆಗೆ 2022 ರ ನೊಬೆಲ್ ಪ್ರಶಸ್ತಿ ಘೋಷಣೆಯಾಗಲಿದ್ದು, 2022ರ ನೊಬೆಲ್ ಶಾಂತಿ ಪ್ರಶಸ್ತಿಗಾಗಿ 251 ವ್ಯಕ್ತಿಗಳು ಮತ್ತು 92 ಸಂಸ್ಥೆಗಳು ಅರ್ಜಿ ಸಲ್ಲಿಸಿವೆ ಎಂದು ವರದಿಯಾಗಿದೆ.