ಲಂಡನ್, ಏ 03 (DaijiworldNews/DB): ಪಾಕಿಸ್ತಾದ ಮಾಜಿ ಪ್ರಧಾನಿ ನವಾಜ್ ಶರೀಫ್ ಮೇಲೆ ಆಡಳಿತ ಪಕ್ಷದ ಕಾರ್ಯಕರ್ತರು ದಾಳಿ ನಡೆಸಿ ಹಲ್ಲೆಗೆ ಯತ್ನಿಸಿರುವುದಾಗಿ ಪಾಕ್ ಪತ್ರಕರ್ತನೋರ್ವ ಟ್ವೀಟ್ ಮಾಡಿದ್ದಾರೆ.
ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿರುದ್ದದ ಅವಿಶ್ವಾಸ ನಿರ್ಣಯದ ಮೇಲೆ ಇಂದು ಮತದಾನ ನಡೆಯಲಿದೆ. ಮತದಾನಕ್ಕೂ ಮುನ್ನಾದಿನ ಶನಿವಾರ ಮಾಜಿ ಪ್ರಧಾನಿ ಮೇಲೆ ಹಲ್ಲೆ ಯತ್ನ ನಡೆದಿದೆ. ತೆಹ್ರಿಕ್-ಇ- ಇನ್ಸಾಫ್ ಪಕ್ಷದ ಕಾರ್ಯಕರ್ತರು ಲಂಡನ್ ನಲ್ಲಿ ಹಲ್ಲೆ ಯತ್ನ ನಡೆಸಿದ್ದಾರೆ ಎಂಬುದಾಗಿ ಪಾಕ್ ಪತ್ರಕರ್ತ ಅಹ್ಮದ್ ನೂರಾನಿ ಟ್ವೀಟ್ ಮಾಡಿ ತಿಳಿಸಿದ್ದಾರೆ.
ದಾಳಿಯಿಂದಾಗಿ ನವಾಜ್ ಶರೀಫ್ ಅವರ ಅಂಗರಕ್ಷಕ ಗಾಯಗೊಂಡಿದ್ದಾರೆ ಎನ್ನಲಾಗಿದೆ.