ಇಸ್ಲಾಮಾಬಾದ್, ಏ 11 (DaijiworldNews/HR): ಪಾಕಿಸ್ತಾನದ ವಿರೋಧ ಪಕ್ಷದ ನಾಯಕ ಶಾಹಬಾಝ್ ಷರೀಫ್ ಅವರು ಪಾಕ್ನ ಮುಂದಿನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಭಾನುವಾರ ಬೆಳಿಗ್ಗೆ ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯದ ಮತದಾನದ ಮೂಲಕ ಪ್ರಧಾನಿ ಇಮ್ರಾನ್ ಖಾನ್ ಪದಚ್ಯುತಗೊಂಡಿದ್ದು, ಇದೀಗ ಶಾಹಬಾಝ್ ಷರೀಫ್ ಅವರು ಪಾಕಿಸ್ತಾನದ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
ಇನ್ನು ನೂತನ ಪ್ರಧಾನಿ ಆಯ್ಕೆ ಬಹಿಷ್ಕರಿಸಿದ್ದ ಇಮ್ರಾನ್ ಖಾನ್ ನೇತೃತ್ವದ ಪಿಟಿಐ (ಪಾಕಿಸ್ತಾನ್ ತೆಹ್ರಿಕ್ ಇ ಇನ್ಸಾಫ್) ಪಕ್ಷದ ಸಂಸದರು ರಾಜೀನಾಮೆ ನೀಡಿ ಸದನದಿಂದ ಹೊರ ನಡೆದರು.
ಶಹಬಾಜ್ ಶರೀಫ್ ಅವರು ಆಗಸ್ಟ್ 2018 ರಿಂದ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದು, ಈ ಹಿಂದೆ ಅವರು ಮೂರು ಬಾರಿ ಪಂಜಾಬ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು