ಬ್ಯಾಂಕಾಕ್, ಏ 27 (DaijiworldNews/HR): ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ಮಿಲಿಟರಿ ಆಡಳಿತದ ಮ್ಯಾನ್ಮಾರ್ನಲ್ಲಿನ ಉಚ್ಚಾಟಿತ ನಾಯಕಿ ಆಂಗ್ ಸಾನ್ ಸೂಕಿ (76) ಅವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಹೋರಾಟಗಾರ್ತಿಯಾಗಿದ್ದ ಆಂಗ್ ಸಾನ್ ಸೂಕಿ ಅವರನ್ನು 2021ರಲ್ಲಿ ಅಧಿಕಾರದಿಂದ ಕೆಳಗಿಳಿಸಲಾಗಿದೆ. ನಂತರದಲ್ಲಿ ಮಿಲಿಟರಿ ಆಡಳಿತ ಹೇರಲಾಗಿದೆ.
ಇನ್ನು ಆಂಗ್ ಸಾನ್ ಸೂಕಿ ವಿರುದ್ಧ 18 ವಿವಿಧ ಅಪರಾಧ ಪ್ರಕರಣ ದಾಖಲಾಗಿದ್ದು, ಅದರಲ್ಲಿ ತಪ್ಪಿತಸ್ಥರೆಂದು ಸಾಬೀತಾದರೆ ಗರಿಷ್ಠ 190 ವರ್ಷ ಜೈಲು ಶಿಕ್ಷೆಯಾಗಲಿದೆ.