ಕಾಬೂಲ್, ಮೇ 05 (DaijiworldNews/HR): ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರವೂ ಮಹಿಳೆಯರ ಶಿಕ್ಷಣವನ್ನು 6ನೇ ತರಗತಿವರೆಗೆ ನಿರ್ಬಂಧಿಸಿ ಆದೇಶಿಸಿದ ಬಳಿಕ ಇದೀಗ ಮಹಿಳೆಯರಿಗೆ ಚಾಲನಾ ಪರವಾನಗಿಯನ್ನೂ ನಿಷೇಧಿಸಿದೆ ಎಂದು ತಿಳಿದು ಬಂದಿದೆ.
ವಾಹನ ಚಾಲನಾ ಪರವಾನಗಿಯನ್ನು ಕಾಬೂಲ್ ಮತ್ತು ಇತರ ಪ್ರಾಂತ್ಯಗಳಲ್ಲಿ ಮಹಿಳೆಯರಿಗೆ ನಿಷೇಧಿಸಲಾಗಿದ್ದು, ಕಾಬೂಲ್ ಸೇರಿದಂತೆ ದೇಶದ ಕೆಲವು ಪ್ರಮುಖ ನಗರಗಳಲ್ಲಿ ಮಹಿಳೆಯರು ವಾಹನ ಚಲಾಯಿಸುತ್ತಿದ್ದು, ತಾಲಿಬಾನ್ ಸರ್ಕಾರ ಇದರ ಮೇಲೆ ನಿರ್ಬಂಧ ವಿಧಿಸಿದೆ.
ಇನ್ನು ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಮುಂದುವರಿದಿದ್ದು, ಮಹಿಳೆಯರ ವಿರುದ್ಧ ಅನೇಕ ನಿಯಮಗಳನ್ನು ಜಾರಿ ಮಾಡುತ್ತಲೇ ಇದೆ.