ಕೊಲಂಬೋ, ಮೇ 06 (DaijiworldNews/SM): ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನ ಕಾರಣದಿಂದಾಗಿ ದೇಶದೆಲ್ಲೆಡೆ ತಲ್ಲಣ ಸೃಷ್ಠಿಯಾಗಿದೆ. ಈಗಾಗಲೇ ಜನರು ಸರಕಾರದ ವಿರುದ್ಧ ಸಿಡಿದೆದ್ದಿದ್ದು, ಶ್ರೀಲಂಕಾದಲ್ಲಿ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕಾರಣದಿಂದಾಗಿ ಸದ್ಯ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.
ಸಾಲದಿಂದ ಕಂಗೆಟ್ಟಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ತುರ್ತು ಪರಿಸ್ಥಿತಿ ಘೊಷಣೆ ಮಾಡಿದ್ದಾರೆ. ಮತ್ತೊಂದೆಡೆ ಆರ್ಥಿಕ ಬಿಕ್ಕಟ್ಟಿನಿಂದಾಗಿ ಕಂಗೆಟ್ಟಿರುವ ಜನರು ಅಧ್ಯಕ್ಷ ರಾಜೀನಾಮೆ ನೀಡುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾರ್ಮಿಕ ಸಂಘಟನೆಗಳು ಶುಕ್ರವಾರ ರಾಷ್ಟ್ರವ್ಯಾಪಿ ಮುಷ್ಕರ ನಡೆಸಿದೆ.
ಸಾರ್ವಜನಿಕ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಅಧ್ಯಕ್ಷ ಗೋಟಾಬಯ ರಾಜಪಕ್ಸೆಯವರ ವಕ್ತಾರರು ತಿಳಿಸಿದ್ದಾರೆ.