ಕೊಲಂಬೋ, ಮೇ 09 (DaijiworldNews/HR): ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸೆ ಸೋಮವಾರ ರಾಜೀನಾಮೆ ನೀಡಿದ್ದಾರೆ.
ಶುಕ್ರವಾರ ನಡೆದ ವಿಶೇಷ ಸಭೆಯಲ್ಲಿ ಅಧ್ಯಕ್ಷ ಗೊಟ್ಬಯಾ ರಾಜಪಕ್ಸೆ ಅವರು ದೇಶದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿಗೆ ಪರಿಹಾರವಾಗಿ ರಾಜೀನಾಮೆ ನೀಡುವಂತೆ ಪ್ರಧಾನಿಗೆ ವಿನಂತಿಸಿದ ಕೆಲವು ದಿನಗಳ ನಂತರ ರಾಜಪಕ್ಸೆ ರಾಜೀನಾಮೆ ನೀಡಿದ್ದಾರೆ.
ಇನ್ನು ಶ್ರೀಲಂಕಾ ಪ್ರಧಾನಿ ಸ್ಥಾನಕ್ಕೆ ಮಹಿಂದ ರಾಜಪಕ್ಸ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಆರೋಗ್ಯ ಸಚಿವ ಪ್ರೊಫೆಸರ್ ಚನ್ನಾ ಜಯ ಸುಮನ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಪ್ರಧಾನಿ ರಾಜೀನಾಮೆ ನೀಡಿದ್ದು, ಸಂಸತ್ತಿನಲ್ಲಿ ಎಲ್ಲಾ ರಾಜಕೀಯ ಪಕ್ಷಗಳನ್ನು ಸರ್ವಪಕ್ಷಗಳ ಸಂಪುಟ ರಚನೆಗೆ ಆಹ್ವಾನಿಸುವ ನಿರೀಕ್ಷೆಯಿದೆ.