ಸಿಯೋಲ್ , ಮೇ 10 (DaijiworldNews/MS): ದಕ್ಷಿಣ ಕೊರಿಯಾದ ನೂತನ ಅಧ್ಯಕ್ಷರಾಗಿ ಯೂನ್ ಸುಕ್-ಯೋಲ್ ಮಂಗಳವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಿಯೋಲ್ ನ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ನಡೆದ ಬೃಹತ್ ಸಮಾರಂಭದಲ್ಲಿ 13ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಉದ್ಘಾಟನಾ ಸಮಾರಂಭದಲ್ಲಿ ಸಂವಿಧಾನವನ್ನು ಗೌರವಿಸುವ ಮೂಲಕ ದೇಶ ಮತ್ತು ಅದರ 52 ಮಿಲಿಯನ್ ಜನರನ್ನು ರಕ್ಷಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.
ಪರಮಾಣು ಶಸ್ತ್ರಸಜ್ಜಿತ ಉತ್ತರ ಕೊರಿಯಾದ ಜೊತೆಗೆ ಉದ್ವಿಗ್ನ ವಾತಾವರಣ ಇರುವ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ಯೂನ್ ಅವರು ಅಧಿಕಾರ ವಹಿಸಿಕೊಂಡಿದ್ದು, ಉತ್ತರ ಕೊರಿಯಾವನ್ನು ಸಂಪೂರ್ಣ ಅಣ್ವಸ್ತ್ರ ನಾಶ ಮಾಡುವುದಾಗಿ ಘೋಷಿಸಿದ್ದಾರೆ.
ಉತ್ತರ ಕೊರಿಯಾದ ಮಿಲಿಟರಿ ಬೆದರಿಕೆಗಳಿಂದ ಆರ್ಥಿಕ ಮಂದಗತಿ ಮತ್ತು ಹೆಚ್ಚಿನ ಹಣದುಬ್ಬರದವರೆಗೆ ಅನೇಕ ಸವಾಲುಗಳನ್ನು ಎದುರಿಸುತ್ತಿರುವ ಕಾರಣ ಅವರ ಅಧಿಕಾರ ಸ್ವೀಕಾರ ಕೊರಿಯಾ ದೇಶದ ಇತಿಹಾಸದಲ್ಲಿ ನಿರ್ಣಾಯಕ ವಾಗಿದೆ. ಯೂನ್ ಅವರು ಪೀಪಲ್ ಪವರ್ ಪಕ್ಷಕ್ಕೆ ಸೇರಿದವರಾಗಿದ್ದು, ಮಾಜಿ ಮುಖ್ಯ ಪ್ರಾಸಿಕ್ಯೂಟರ್ ಆಗಿದ್ದಾರೆ.