ಕೊಲಂಬೋ, ಮೇ 12 (DaijiworldNews/MS): ಶ್ರೀಲಂಕಾದ ನೂತನ ಪ್ರಧಾನಿಯಾಗಿ ರಾನಿಲ್ ವಿಕ್ರಮಸಿಂಘೆ ನೇಮಕಗೊಂಡಿದ್ದಾರೆ.
ಆರ್ಥಿಕ ತುರ್ತು ಪರಿಸ್ಥಿತಿಯ ಹೊಣೆ ಹೊತ್ತು ಮಹಿಂದಾ ರಾಜಪಕ್ಸೆ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟಿನಲ್ಲಿ ಮುಳುಗಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಸ್ಥಿರತೆಯನ್ನು ಕಾಪಾಡುವ ಪ್ರಯತ್ನದಲ್ಲಿ ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರು ನೂತನ ಪ್ರಧಾನಿಯಾಗಿ ಯುನೈಟೆಡ್ ನ್ಯಾಷನಲ್ ಪಾರ್ಟಿ (ಯುಎನ್ಪಿ)ಯ ರನಿಲ್ ವಿಕ್ರಮಸಿಂಘೆ ಅವರನ್ನು ನೇಮಕ ಮಾಡಿದ್ದಾರೆ.
ಐದು ಬಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ ವಿಕ್ರಮಸಿಂಘೆ ಅವರಿಗೆ ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಪ್ರಮಾಣ ವಚನ ಬೋಧಿಸಿದರು.ಶ್ರೀಲಂಕಾ ಪೊದುಜನ ಪೆರಮುನಾ (ಎಸ್ಎಲ್ಪಿಪಿ) ಸಂಸದರ ಬೆಂಬಲವನ್ನು ಪಡೆದುಕೊಂಡ ನಂತರ ವಿಕ್ರಮಸಿಂಘೆ ಅವರು ಪ್ರಧಾನಿ ಹುದ್ದೆಯನ್ನು ಒಪ್ಪಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.