ಜೆಡ್ಡಾ, ಮೇ 23 (DaijiworldNews/HR): ಕೊರೊನಾ ಪ್ರಕರಣಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾವು ಭಾರತ ಸೇರಿದಂತೆ ಹದಿನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ.
ಭಾರತ, ಲೆಬನಾನ್, ಸಿರಿಯಾ, ಟರ್ಕಿ, ಇರಾನ್, ಅಫ್ಘಾನಿಸ್ತಾನ, ಯೆಮೆನ್, ಸೊಮಾಲಿಯಾ, ಇಥಿಯೋಪಿಯಾ, ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ದಿ ಕಾಂಗೋ, ಲಿಬಿಯಾ, ಇಂಡೋನೇಷಿಯಾ, ವಿಯೆಟ್ನಾಂ, ಅರ್ಮೇನಿಯಾ, ಬೆಲಾರಸ್ ಮತ್ತು ವೆನೆಜುವೆಲಾ ಸೇರಿದಂತೆ ಸೌದಿ ಅರೇಬಿಯಾದ ಪ್ರಜೆಗಳು ಪ್ರಯಾಣಿಸುವುದನ್ನು ನಿಷೇಧಿಸಿದೆ ಎಂದು ವರದಿಯಾಗಿದೆ.
ಇನ್ನು ಸೌದಿ ಅರೇಬಿಯಾದಲ್ಲಿ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದ್ದು, ಯಾವುದೇ ಶಂಕಿತ ಮಂಕಿಪಾಕ್ಸ್ ಪ್ರಕರಣಗಳನ್ನು ಮೇಲ್ವಿಚಾರಣೆ ಮಾಡಲು, ಪತ್ತೆಹಚ್ಚಲು ಮತ್ತು ಯಾವುದೇ ಹೊಸ ಪ್ರಕರಣಗಳು ಕಂಡು ಬಂದರೆ ಅದರ ವಿರುದ್ಧ ಹೋರಾಡಲು ನಮ್ಮ ದೇಶವು ಸಾಮರ್ಥ್ಯ ಹೊಂದಿದೆ ಎಂದು ಆರೋಗ್ಯ ಇಲಾಖೆಯ ಉಪ ಸಚಿವ ತಿಳಿಸಿದ್ದಾರೆ.