ಸೆನೆಗಲ್, ಮೇ 26 (DaijiworldNews/MS): ಪಶ್ಚಿಮ ಆಫ್ರಿಕಾದ ರಾಷ್ಟ್ರವಾದ ಸೆನೆಗಲ್ನ ಪ್ರಾದೇಶಿಕ ಆಸ್ಪತ್ರೆಯೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ 11 ನವಜಾತ ಶಿಶುಗಳು ಮೃತಪಟ್ಟಿವೆ.
ರಾಜಧಾನಿ ಡಾಕರ್ನಿಂದ ಪೂರ್ವಕ್ಕೆ 75 ಮೈಲುಗಳಷ್ಟು ದೂರದಲ್ಲಿರುವ ತಿವೌವಾನ್ನಲ್ಲಿರುವ ಅಬ್ದೌ ಅಜೀಜ್ ಸೈ ದಬಾಖ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 11 ನವಜಾತ ಶಿಶುಗಳು ಮೃತಪಟ್ಟಿವೆ.
"ಈ ಘಟನೆ ನೋವು ಮತ್ತು ನಿರಾಶೆ ಮೂಡಿಸಿದೆ, ತಾಯಂದಿರು ಮತ್ತು ಅವರ ಕುಟುಂಬಗಳಿಗೆ, ನಾನು ನನ್ನ ಆಳವಾದ ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇನೆ" ಎಂದು ಅಧ್ಯಕ್ಷ ಮ್ಯಾಕಿ ಸಾಲ್ ಅವರು ಟ್ವಿಟ್ ಮಾಡಿ ತಿಳಿಸಿದ್ದಾರೆ.
ಘಟನೆಯಲ್ಲಿ ಮೂರು ಶಿಶುಗಳನ್ನು ರಕ್ಷಿಸಲಾಗಿದೆ ಎಂದು ನಗರದ ಮೇಯರ್ ಡೆಂಬಾ ಡಿಯೋಪ್ ಹೇಳಿದ್ದಾರೆ.