ಬೀಜಿಂಗ್, ಜೂ 01 (DaijiworldNews/MS): ನೈಋತ್ಯ ಚೀನಾದಲ್ಲಿ ಬುಧವಾರ ಭೂಕಂಪ ಸಂಭವಿಸಿದ ನಂತರ ಓರ್ವ ಸಾವನ್ನಪ್ಪಿ, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.
ಪ್ರಾಂತೀಯ ರಾಜಧಾನಿ ಚೆಂಗ್ಡುವಿನ ಪಶ್ಚಿಮಕ್ಕೆ 100 ಕಿಲೋಮೀಟರ್ (60 ಮೈಲಿ) ದೂರದಲ್ಲಿರುವ ಸಿಚುವಾನ್ ಪ್ರಾಂತ್ಯದ ವಿರಳ ಜನಸಂಖ್ಯೆಯ ಪ್ರದೇಶದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ
ಮೂರು ನಿಮಿಷಗಳ ನಂತರ ರಿಕ್ಟರ್ ಮಾಪಕದಲ್ಲಿ 4.5 ರ ಸಮೀಪ ಎರಡನೇ ಭೂಕಂಪ ಸಂಭವಿಸಿದ್ದು ಓರ್ವ ಸಾವನ್ನಪ್ಪಿ, ಆರು ಮಂದಿ ಗಾಯಗೊಂಡಿದ್ದಾರೆ.
ಸ್ಥಳೀಯ ಕಾಲಮಾನ ಸಂಜೆ 5 ಗಂಟೆ ಸುಮಾರಿಗೆ ಸಿಚುವಾನ್ ಪ್ರಾಂತ್ಯದ ವಿರಳ ಜನನಿಬಿಡ ಪ್ರದೇಶದಲ್ಲಿ ಭೂಕಂಪಗಳು ಸಂಭವಿಸಿವೆ ಎಂದು ಚೀನಾದ ಭೂಕಂಪ ಸಂಸ್ಥೆ ವರದಿ ಮಾಡಿದೆ, ರಕ್ಷಣಾ ಪ್ರಯತ್ನಗಳು ಮುಂದುವರಿದಿವೆ