ಇಸ್ಲಾಮಾಬಾದ್, 03 (DaijiworldNews/DB): ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಗಿಲ್ಗಿಟ್- ಬಾಲ್ಟಿಸ್ತಾನ ಹಾಗೂ ಖೈಬರ್ ಪಖ್ತುಂಖ್ವಾ ಪ್ರಾಂತ್ಯಗಳ ಮುಖ್ಯಮಂತ್ರಿಗಳ ವಿರುದ್ಧ ದೇಶದ ಮೇಲೆ ದಾಳಿಗೆ ಸಂಚು ರೂಪಿಸಿದ ಆರೋಪದ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಲು ಪಾಕಿಸ್ತಾನ ಸರ್ಕಾರ ಚಿಂತನೆ ನಡೆಸಿದೆ.
ಮೇ 25 ರಂದು ಪಾಕಿಸ್ತಾನ್ ತೆಹ್ರಿಕ್-ಎ-ಇನ್ಸಾಫ್ ಪಕ್ಷ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆ ವೇಳೆ ಗಲಭೆ ನಡೆದಿತ್ತು. ಈ ಗಲಭೆಯು ದೇಶದ ಒಕ್ಕೂಟ ವ್ಯವಸ್ಥೆಯ ವಿರುದ್ದ ಆಯೋಜಿಸಿದ್ದ ದಾಳಿಯಾಗಿತ್ತು ಎಂದು ಆರೋಪಿಸಿ ಮೂವರ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
ಆಂತರಿಕ ವ್ಯವಹಾರಗಳ ಸಚಿವ ರಾಣಾ ಸನಾ ಉಲ್ಲಾ ಖಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.