ಇಸ್ಲಾಮಾಬಾದ್, ಜೂ. 05 (DaijiworldNews/DB): ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಮಾಹಿತಿ ಹಿನ್ನಲೆಯಲ್ಲಿ ಇಸ್ಲಾಮಾಬಾದ್ನಲ್ಲಿ ಭದ್ರತೆ ಗಬಿಗಿಗೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸೆಕ್ಷನ್ 144 ಜಾರಿ ಮಾಡಲಾಗಿದೆ.
ಇಸ್ಲಾಮಾಬಾದ್ನಲ್ಲಿ ಪೊಲೀಸರು ಶನಿವಾರ ರಾತ್ರಿಯಿಂದಲೇ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಬನಿ ಗಲಾ ಪ್ರದೇಶದಲ್ಲಿ ಇಮ್ರಾನ್ ನಿವಾಸ ಇರುವುದರಿಂದ ಇಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದ್ದು, ಜನ ಗುಂಪು ಸೇರುವುದು, ಗುಂಪು ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಇಲ್ಲಿ ಜನರ ಚಲನವಲನಗಳ ಮೇಲೆ ಪೊಲೀಸರು ಹೆಚ್ಚಿನ ನಿಗಾ ಇಟ್ಟಿದ್ದು, ವಿಶೇಷ ಭದ್ರತಾ ಪಹರೆಯನ್ನು ಕೂಡಾ ನಿಯೋಜನೆ ಮಾಡಲಾಗಿದೆ.
ಇಸ್ಲಮಾಬಾದ್ನ ಅಲ್ಲಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಸೇನೆಗೂ ಮಾಹಿತಿ ರವಾನೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.