ಇಸ್ಲಾಮಾಬಾದ್, ಜೂ 06 (DaijiworldNews/HR): ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಝೇಲಂ ನಗರದಲ್ಲಿ ಪತಿಯನ್ನು ಕಟ್ಟಿಹಾಕಿ ಗರ್ಭಿಣಿಯ ಮೇಲೆ ಐವರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ನಡೆದಿರುವುದಾಗಿ ವರದಿಯಾಗಿದೆ.
ಐವರು ಆರೋಪಿಗಳು ಮಹಿಳೆಯ ಮನೆಗೆ ನುಗ್ಗಿದ್ದು, ನಂತರ ಆಕೆಯ ಪತಿಯನ್ನು ಕಟ್ಟಿಹಾಕಿ ಗರ್ಭಿಣಿಯ ಮೇಲೆ ಐವರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇನ್ನು ಘಟನೆಯ ಬಳಿಕ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದು, ಸಂತ್ರಸ್ತೆಯ ಮಾಹಿತಿಯಂತೆ ಆಸ್ಪತ್ರೆಯ ಸಿಬಂದಿಗಳು ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿರುವುದಾಗಿ ವರದಿ ವಿವರಿಸಿದೆ.