ದುಬೈ, ಜೂ 10 (DaijiworldNews/DB): ಪಾಕಿಸ್ಥಾನದ ಮಾಜಿ ಅಧ್ಯಕ್ಷ, ಮಾಜಿ ಸೇನಾ ಸರ್ವಾಧಿಕಾರಿ ಜನರಲ್ ಪರ್ವೇಜ್ ಮುಷರಫ್ ( 78) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಅನಾರೋಗ್ಯದಿಂದಾಗಿ ದುಬೈನಲ್ಲಿರುವ ಅಮೆರಿಕದ ಆಸ್ಪತ್ರೆಯಲ್ಲಿ ವೆಂಟಿಲೇಟರ್ನಲ್ಲಿ ಪರ್ವೇಜ್ ಮುಷರಫ್ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಿಲಿಟರಿ ಜನರಲ್ ಆಗಿ ಕಾರ್ಯ ನಿರ್ವಹಿಸಿದ್ದ ಮುಷರಫ್ ನಿವೃತ್ತಿಯ ಬಳಿಕ 1999ರಲ್ಲಿ ಫೆಡರಲ್ ಸರ್ಕಾರದ ಯಶಸ್ವಿ ಮಿಲಿಟರಿ ಸ್ವಾಧೀನದ ತರುವಾಯ ಪಾಕಿಸ್ಥಾನದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇವರು ಪಾಕಿಸ್ತಾನದ ಹತ್ತನೇ ಅಧ್ಯಕ್ಷರಾಗಿ 2008 ರವರೆಗೆ ಕಾರ್ಯ ನಿರ್ವಹಿಸಿದ್ದರು.