ಟೋಕಿಯೊ, ಜು 08 (DaijiworldNews/DB): ಗುಂಡಿನ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಜಪಾನ್ನ ಮಾಜಿ ಪ್ರಧಾನಿ ಶಿಂಜೊ ಅಬೆ ಮೃತಪಟ್ಟಿದ್ದಾರೆ.
ಪೂರ್ವ ಜಪಾನ್ ನ ನಾರಾ ನಗರದಲ್ಲಿ ಇಂದು ಬೆಳಗ್ಗೆ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದ ವೇಳೆ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ ನಡೆದಿತ್ತು. ಎದೆ, ಕುತ್ತಿಗೆ ಸೇರಿದಂತೆ ದೇಹದ ವಿವಿಧೆಡೆ ಗುಂಡು ತಗುಲಿದ್ದರಿಂದ ತೀವ್ರ ರಕ್ತಸ್ರಾವವಾಗಿದ್ದಲ್ಲದೆ, ಹೃದಯ ಸ್ತಂಭನಕ್ಕೂ ಒಳಗಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು. ಶಿಂಜೊ ಅಬೆ ಮೃತಪಟ್ಟಿರುವ ವಿಚಾರವನ್ನು ಜಪಾನ್ ನ ಸುದ್ದಿಸಂಸ್ಥೆಯೊಂದು ಇಂದು ಮಧ್ಯಾಹ್ನ ಅಧಿಕೃತವಾಗಿ ಘೋಷಿಸಿದೆ.
ಜಪಾನ್ನ ಮಾಜಿ ಪ್ರಧಾನಿ ಶಿಂಜೊ ಅಬೆಯವರ ನಿಧನಕ್ಕೆ ವಿಶ್ವದ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದಾರೆ. ಶುದ್ದಹಸ್ತ ರಾಜಕಾರಣಿಯೊಬ್ಬರನ್ನು ಜಪಾನ್ ಮಾತ್ರವಲ್ಲದೆ, ಇಡೀ ವಿಶ್ವವೇ ಕಳೆದುಕೊಂಡಿದೆ ಎಂಬುದಾಗಿ ವಿಶ್ವನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.