ಕೊಲಂಬೋ, ಜು 09 (DaijiworldNews/HR): ಶ್ರೀಲಂಕಾ ಅಧ್ಯಕ್ಷ ಗೋಟಾಬಯ ವಿರುದ್ಧದ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ ಲಂಕಾ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, ರಾಜಕೀಯ ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಸರ್ವಪಕ್ಷ ಸರ್ಕಾರಕ್ಕೆ ದಾರಿ ಮಾಡಿಕೊಡುವ ನಿಟ್ಟಿನಲ್ಲಿ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಇನ್ನು ಸಂಸತ್ತಿನ ಸ್ಪೀಕರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶ್ರೀಲಂಕಾದ ಪಕ್ಷದ ನಾಯಕರು, ಆರ್ಥಿಕ ಕುಸಿತ ಮತ್ತು ಜನಪ್ರಿಯ ಅಶಾಂತಿಯ ನಂತರ ಅಧ್ಯಕ್ಷ ಗೋಟಬಯಾ ರಾಜಪಕ್ಸೆ ಅವರನ್ನು ರಾಜೀನಾಮೆ ನೀಡುವಂತೆ ವಿನಂತಿಸಿದ್ದಾರೆ ಎನ್ನಲಾಗಿದೆ.