ಕೊಲಂಬೋ, ಜು 11(DaijiworldNews/MS): ಪ್ರತಿಭಟನಾಕಾರರಿಂದ ಹೆಚ್ಚುತ್ತಿರುವ ಒತ್ತಡದ ನಡುವೆ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಅಧಿಕೃತವಾಗಿ ಪ್ರಧಾನಿ ರನಿಲ್ ವಿಕ್ರಮಸಿಂಘೆ ತಿಳಿಸಿದ್ದಾರೆ.
ತಾವು ಈ ಹಿಂದೆ ಘೋಷಿಸಿದಂತೆ ರಾಜೀನಾಮೆ ನೀಡಿರುವುದಾಗಿ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರಿಗೆ ಅಧಿಕೃತವಾಗಿ ತಿಳಿಸಿದ್ದಾರೆ ಎಂದು ಪ್ರಧಾನಿ ಕಚೇರಿ ಸೋಮವಾರ ಪ್ರಕಟಿಸಿದೆ.
ಸಾವಿರಾರು ಪ್ರತಿಭಟನಾಕಾರರು ಅಧ್ಯಕ್ಷರ ಅಧಿಕೃತ ನಿವಾಸಕ್ಕೆ ನುಗ್ಗಿದ ನಂತರ ರಾಜಪಕ್ಸೆ ಜುಲೈ 13 ಬುಧವಾರ ರಾಜೀನಾಮೆ ನೀಡಲಿದ್ದಾರೆ ಎಂದು ಸಂಸದೀಯ ಸ್ಪೀಕರ್ ಈ ಹಿಂದೆ ಹೇಳಿದ್ದರು.ಆದರೆ ಶನಿವಾರದಂದು ಅಧ್ಯಕ್ಷರ ಭವನಕ್ಕೆ ಸಾವಿರಾರು ಜನರು ನುಗ್ಗಿ ದಾಂಧಲೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದೇ ರಾಜೀನಾಮೆ ನೀಡಿದ್ದಾರೆ.
ಪ್ರಧಾನಿ ಹುದ್ದೆಗೆ ವಿಕ್ರಂಸಿಂಘಿ ರಾಜೀನಾಮೆ ಘೋಷಣೆ ಮಾಡಿದ ಬೆನ್ನಲ್ಲೇ, ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರು ಕೂಡ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.