ನ್ಯೂಯಾರ್ಕ್ , ಜು 15 (DaijiworldNews/MS): ಡೊನಾಲ್ಡ್ ಟ್ರಂಪ್ ಅವರ ಮೊದಲ ಪತ್ನಿ, ಉದ್ಯಮಿ ಇವಾನಾ ಟ್ರಂಪ್ (73) ನಿಧನರಾಗಿದ್ದಾರೆ.
ನ್ಯೂಯಾರ್ಕ್ ನಗರದ ತಮ್ಮ ನಿವಾಸದಲ್ಲಿ ಮೆಟ್ಟಿಲಿನಿಂದ ಜಾರಿ ಬಿದ್ದು, ಅಥವಾ ಹೃದಯಾಘಾತದಿಂದ ಗುರುವಾರ ಇವಾನಾ ಟ್ರಂಪ್ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ಇವರಿಗೆ ಡೊನಾಲ್ಡ್ ಜೂನಿಯರ್, ಇವಾಂಕಾ, ಎರಿಕ್ ಎಂಬ ಮೂವರು ಮಕ್ಕಳಿದ್ದಾರೆ.
"ಅವರು ಸುಂದರ ಮತ್ತು ಅದ್ಭುತ ಮಹಿಳೆ. ಅವರು ಉತ್ತಮ ಮತ್ತು ಸ್ಪೂರ್ತಿದಾಯಕ ಜೀವನವನ್ನು ನಡೆಸಿದರು" ಎಂದು ಡೊನಾಲ್ಡ್ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಇವಾನಾ ಟ್ರಂಪ್ ಬಗ್ಗೆ ಬರೆದುಕೊಂಡಿದ್ದಾರೆ.
ಮಾಡೆಲ್ ಆಗಿದ್ದ ಇವಾನಾ 1977ರಲ್ಲಿ ಉದಯೋನ್ಮುಖ ರಿಯಲ್ ಎಸ್ಟೇಟ್ ಡೆವಲಪರ್ ಆಗಿದ್ದ ಡೊನಾಲ್ಡ್ ಟ್ರಂಪ್ ಅವರನ್ನು ವಿವಾಹವಾದ್ದರು. 1992ರಲ್ಲಿ ವಿಚ್ಛೇದನ ಪಡೆದರು.
.