ಕೊಲಂಬೊ, ಜು 15 (DaijiworldNews/HR): ರಾನಿಲ್ ವಿಕ್ರಮ ಸಿಂಘೆ ಅವರು ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಸುಪ್ರೀಂಕೋರ್ಟ್ನ ಮುಖ್ಯನ್ಯಾಯಮೂರ್ತಿ ಜಯಂತ ಜಯಸೂರ್ಯ ಅವರು ರಾನಿಲ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ. ಈ ಕುರಿತು ಮಾತನಾಡಿದ ರಾನಿಲ್, ಶ್ರೀಲಂಕಾದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಮರುಸ್ಥಾಪಿಸುವುದು ನನ್ನ ಮೊದಲ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.
ಇನ್ನು ಸಿಂಗಪುರದಲ್ಲಿರುವ ಗೊಟಬಯ ರಾಜಪಕ್ಸ ಅವರು ಸ್ಪೀಕರ್ ಮಹಿಂದಾ ಯಾಪಾ ಅಬೆವರ್ದನ ಅವರಿಗೆ ಇ–ಮೇಲ್ ಮೂಲಕ ರಾಜೀನಾಮೆ ಪತ್ರ ಕಳುಹಿಸಿದ್ದರು.