ಕೊಲಂಬೊ, ಜು 20 (DaijiworldNews/MS): ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ರಾನಿಲ್ ವಿಕ್ರಮ ಸಿಂಘೆ ಆಯ್ಕೆಯಾಗಿದ್ದಾರೆ.
ಶ್ರೀಲಂಕಾದ ತೀವ್ರ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಗೋಟಬಯ ರಾಜಪಕ್ಸೆ ರಾಜೀನಾಮೆ ನೀಡಿದ ಹಿನ್ನಲೆ ಇಂದು ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ರಾನಿಲ್ ವಿಕ್ರಮ ಸಿಂಘೆ ಅವರು ಶ್ರೀಲಂಕಾದ 8 ನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದು ಅವರಿಗೆ 134 ಮತಗಳು ದೊರಕಿವೆ ಎಂದು ವರದಿಯಾಗಿದೆ.
ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ರಾನಿಲ್ ವಿಕ್ರಮಸಿಂಘೆ, "ದೇಶವು ತುಂಬಾ ಕಠಿಣ ಪರಿಸ್ಥಿತಿಯಲ್ಲಿದೆ, ನಮ್ಮ ಮುಂದೆ ದೊಡ್ಡ ಸವಾಲುಗಳಿವೆ" ಎಂದು ಹೇಳಿದ್ದಾರೆ.