ಕೊಲೊಂಬೊ, ಜು 21 (DaijiworldNews/MS): ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಗುರುವಾರ ದೇಶದ ಮುಖ್ಯ ನ್ಯಾಯಾಧೀಶರಿಂದ ಪ್ರಮಾಣ ವಚನ ಸ್ವೀಕರಿಸಿದರು ಎಂದು ಅಧ್ಯಕ್ಷರ ಮಾಧ್ಯಮ ಕಚೇರಿ ತಿಳಿಸಿದೆ.
ಶ್ರೀಲಂಕಾದ 8ನೇ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಆಯ್ಕೆಯಾಗಿದ್ದಾರೆ. 134 ಮತಗಳೊಂದಿಗೆ ರಾನಿಲ್ ವಿಕ್ರಮಸಿಂಘೆ ಶ್ರೀಲಂಕಾ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಹಿಂದಿನ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ದೇಶದಿಂದ ಪಲಾಯನ ಮಾಡಿ ಕಳೆದ ವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಆ ಬಳಿಕ ಮಾತನಾಡಿದ ಅವರು ದೇಶದ ಸಂಕಷ್ಟವನ್ನು ಪಾರು ಮಾಡಲು ಎಲ್ಲ ಪ್ರಯತ್ನ ಮಾಡಲಾಗುವುದು ಆಶ್ವಾಸನೆ ನೀಡಿದರು.