ವಾಷಿಂಗ್ಟನ್,ಜ 30 (MSP): ಭಾರತದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷವು ಹಿಂದುತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿದರೆ , ಮೇ ತಿಂಗಳಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮೊದಲು ಕೋಮು ಗಲಭೆ ಸೃಷ್ಟಿಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಅಮೆರಿಕಾ ಗುಪ್ತಚರ ಇಲಾಖೆ ವರದಿ ಮಾಡಿದೆ.
2019ರಲ್ಲಿ ಜಗತ್ತಿನಲ್ಲಿ ಉಂಟಾಗಬಹುದಾದ ಅಪಾಯ ಸಂದರ್ಭಗಳ ಪರಿಶೀಲನೆ ನಡೆಸಿದ ಅಮೆರಿಕಾ ಗುಪ್ತಚರ ಇಲಾಖೆಯು ಭಾರತದಲ್ಲಿ ಮುಂಬರುವ ಚುನಾವಣೆಯಲ್ಲಿ ಕೋಮುಗಲಭೆ ನಡೆಯುವ ಸಾಧ್ಯತೆ ಹೇರಳವಾಗಿದೆ ಎಂದು ತಿಳಿಸಿದೆ. ಅಮೆರಿಕಾ ಗುಪ್ತಚರ ಇಲಾಖೆಯೂ ಅಮೆರಿಕಾ ಸೆನೆಟ್ ಗೆ ಸಲ್ಲಿಸಿದ ವರದಿಯಲ್ಲಿ ಈ ವಿಚಾರಗಳು ಒಳಗೊಂಡಿದೆ
ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಬಿಜೆಪಿ ಸರ್ಕಾರವು ಹಿಂದೂ ರಾಷ್ಟ್ರೀಯತೆಗೆ ಪ್ರಾಮುಖ್ಯತೆ ನೀಡಿದೆ, ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಕೋಮು ಗಲಭೆ ಉಂಟಾಗುವ ಸಾಧ್ಯತೆಯಿದೆ. ಇದಲ್ಲದೇ ಚುನಾವಣೆ, ಭಯೋತ್ಪಾದನೆ, ಗಡಿ ನಿಯಂತ್ರಣ ರೇಖೆಯಲ್ಲಿ ಗುಂಡಿನ ದಾಳಿ ಮುಂತಾದ ಕಾರಣಗಳಿಂದ ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಬಂಧದಲ್ಲಿ ಇದೇ ವೇಳೆ ಹದಗೆಸ್ಡಲಿದೆ ಎಂದು ವರದಿ ಸಲ್ಲಿಸಿದೆ.