ನ್ಯೂಯಾರ್ಕ್, ಆ 13 (DaijiworldNews/MS): ಭಾರತದ ಮೂಲದ ಅಮೆರಿಕಾ ನಿವಾಸಿ ಲೇಖಕ ಸಲ್ಮಾನ್ ರಶ್ದಿ ಅವರನ್ನು ವೇದಿಕೆ ಮೇಲೆ ಚಾಕು ಚುಚ್ಚಿ ಕೊಲೆ ಮಾಡುವ ಪ್ರಯತ್ನ ನ್ಯೂಯಾರ್ಕ್ ನಲ್ಲಿ ಶುಕ್ರವಾರ ನಡೆದಿದೆ. ಗಂಭೀರ ಗಾಯಗೊಂಡಿರುವ ಸಲ್ಮಾನ್ ರಶ್ದಿ ಅವರನ್ನು ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಇರಿಸಲಾಗಿದೆ.ಅವರು ಒಂದು ಕಣ್ಣನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಮತ್ತು ಅವರ ಯಕೃತ್ತು ಸಹ ಹಲ್ಲೆಯಿಂದ ಹಾನಿಗೊಳಗಾಗಿದೆ ಎಂದು ಅವರ ಏಜೆಂಟ್ ತಿಳಿಸಿದ್ದಾರೆ.
ರಶ್ದಿ ಅವರು ನ್ಯೂಯಾರ್ಕ್ ಚೌಟಕ್ವಾ ಇನ್ ಸ್ಟಿತ್ಯೂಟ್ ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದು , ಉಪನ್ಯಾಸ ಕೊಡುವವರಿದ್ದರು. ನಿರೂಪಕರು ರಶ್ಬಿ ಅವರ ಪರಿಚಯ ಮಾಡಿಕೊಡುತ್ತಿದ್ದಂತೆಯೇ ವೇದಿಕೆ ಮೇಲೆ ಬಂದಿದ್ದ ಯುವಕ ಚೂರಿ ಇರಿದಿದ್ದ.
ರಶ್ದಿಯನ್ನು ಇರಿದ ಆರೋಪಿಯನ್ನು ನ್ಯೂಜೆರ್ಸಿಯ ಫೇರ್ವ್ಯೂನ ಹದಿ ಮತರ್ (24) ಎಂದು ಗುರುತಿಸಲಾಗಿದೆ ಈತನನ್ನು ತಕ್ಷಣ ವಶಕ್ಕೆ ಪಡೆಯಲಾಗಿದೆ ಎಂದು ನ್ಯೂಯಾರ್ಕ್ ರಾಜ್ಯ ಪೊಲೀಸ್ನ ಮೇಜರ್ ಯುಜಿನ್ ಸ್ಟಾನಿಸ್ಜೆವ್ಸ್ಕಿ ತಿಳಿಸಿದ್ದಾರೆ.
ಸಲ್ಮಾನ್ ಅವರು ಒಂದು ಕಣ್ಣನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ತೋಳಿನ ನರಗಳು ತುಂಡಾಗಿವೆ ಮತ್ತು ಅವರ ಯಕೃತ್ತು ಇರಿತದಿಂದ ಹಾನಿಗೊಳಗಾಗಿದೆ' ಎಂದು ಅವರ ಏಜೆಂಟ್ ಆಂಡ್ರ್ಯೂ ವೈಲಿ ಆಂಡ್ರ್ಯೂ ವೈಲಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
೧೯೮೮ ರಲ್ಲಿ ಬರೆದ 'ದಿ ಸೆಟನಿಕ್ ವರ್ಸಸ್' ಕೃತಿ ಬರೆದ ನಂತರ ಹಲವು ವರ್ಷಗಳಿಂದ ಇಸ್ಲಾಮಿಸ್ಟ್ಗಳಿಂದ ಜೀವ ಬೆದರಿಕೆಗಳನ್ನು ಎದುರಿಸುತ್ತಿದ್ದರು