ಮಾಸ್ಕೋ, ಆ 15 (DaijiworldNews/MS): 76 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಭಾರತದ ನಾಯಕತ್ವ ಮತ್ತು ಭಾರತೀಯರನ್ನು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶ್ಲಾಘಿಸಿದ್ದಾರೆ.
ವಿಶ್ವದಲ್ಲಿ ಭಾರತದ ಪ್ರಾಮುಖ್ಯತೆಯನ್ನು ಎತ್ತಿ ಹಿಡಿದ ಅವರು, "ದಯವಿಟ್ಟು, ಭಾರತದ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಮ್ಮ ಆತ್ಮೀಯ ಅಭಿನಂದನೆಗಳನ್ನು ಸ್ವೀಕರಿಸಿ ಎಂದು ಹಾರೈಸಿದರು.
ಭಾರತವೂ ಆರ್ಥಿಕ, ಸಾಮಾಜಿಕ, ವೈಜ್ಞಾನಿಕ, ತಾಂತ್ರಿಕ ಕ್ಷೇತ್ರ ಹಾಗೂ ಇತರ ಕ್ಷೇತ್ರ ಸಾರ್ವತ್ರಿಕವಾಗಿ ಗುರುತಿಸಲ್ಪಟ್ಟು ಯಶಸ್ಸನ್ನು ಸಾಧಿಸಿದೆ. ಭಾರತವು ವಿಶ್ವ ವೇದಿಕೆಯಲ್ಲಿ ಪ್ರತಿಷ್ಠೆಯನ್ನು ಹೊಂದಿದ್ದು ಅಂತರರಾಷ್ಟ್ರೀಯ ಕಾಸಮಸ್ಯೆಗಳನ್ನು ಪರಿಹರಿಸುವಲ್ಲಿ ಪ್ರಮುಖ ರಚನಾತ್ಮಕ ಪಾತ್ರವನ್ನು ವಹಿಸುತ್ತದೆ ಎಂದ ಪುಟಿನ್ ಅವರು ಇದೇ ವೇಳೆ ಅಧ್ಯಕ್ಷ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದರು.
ಮಾಸ್ಕೋ ಮತ್ತು ನವದೆಹಲಿ ವಿವಿಧ ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ಸಹಕರಿಸುತ್ತಿವೆ ಎಂದ ಅವರು, ಎರಡು ರಾಷ್ಟ್ರಗಳ ನಡುವಿನ ಜನರ-ಜನರ ಬಾಂಧವ್ಯವನ್ನು ಒತ್ತಿ ಹೇಳಿದರು.