ಟೋಕಿಯೊ , ಅ 25 (DaijiworldNews/MS): ಹತ್ಯೆಯಾದ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸೆಪ್ಟೆಂಬರ್ 27ರಂದು ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್ಗೆನ ಟೋಕಿಯೋಗೆ ಆಗಮಿಸುವ ಸಾಧ್ಯತೆ ಇದೆ ಎಂದು ಜಪಾನ್ ಮಾಧ್ಯಮವೊಂದು ವರದಿ ಮಾಡಿದೆ.
ಅಂತ್ಯಸಂಸ್ಕಾರಕ್ಕೆ ಪ್ರಧಾನಿ ಮೋದಿ ಭೇಟಿ ಕುರಿತು ಯೋಜನೆ ರೂಪಿಸಲಾಗುತ್ತಿದೆ. ಈ ವೇಳೆ ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಕ್ಯುಡೊ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಆದರೆ ಪ್ರಧಾನಿ ಮೋದಿ ಭೇಟಿ ಬಗ್ಗೆ ಭಾರತ ಅಥವಾ ಜಪಾನ್ನಿಂದ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ.
ಜುಲೈ 8ರಂದು ಚುನಾವಣಾ ಪ್ರಚಾರ ನಡೆಸುತ್ತಿದ್ದ ಮಾಜಿ ಪ್ರಧಾನಿ ಶಿಂಜೊ ಅಬೆ (67) ಅವರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು