ರಿಯಾದ್, ಆ 31 (DaijiworldNews/DB): ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕೆ ಮಹಿಳೆಯೊಬ್ಬರಿಗೆ ಸೌದಿ ಅರೇಬಿಯಾದ ನ್ಯಾಯಾಲಯವು 45 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ನೌರಾ ಬಿಂತ್ ಸಯೀದ್ ಅಲ್-ಕಹ್ತಾನಿ ಶಿಕ್ಷೆಗೆ ಗುರಿಯಾದ ಮಹಿಳೆ. ಆದರೆ ಮಹಿಳೆ ಯಾವ ವಿಚಾರದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು ಎಂಬುದು ತಿಳಿದು ಬಂದಿಲ್ಲ. ಸೌದಿ ಸರ್ಕಾರವೂ ಈ ಕುರಿತು ಯಾವುದೇ ಮಾಹಿತಿ ನೀಡಿಲ್ಲ ಎಂದು ಅಮೆರಿಕಾ ಮೂಲದ ಪತ್ರಿಕೆಯೊಂದು ವರದಿ ಮಾಡಿದೆ.
ಸಾಮಾಜಿಕ ಕಾರ್ಯಕರ್ತೆಯಾಗಿ ಗುರುತಿಸಿಕೊಂಡಿದ್ದ ಮಹಿಳೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಆ ಮೂಲಕ ಸಾಮಾಜಿಕ ಜಾಲತಾಣ ಬಳಸಿ ಸಾರ್ವಜನಿಕ ವ್ಯವಸ್ಥೆಯ ನಿಯಮವನ್ನು ಆಕೆ ಉಲ್ಲಂಘನೆ ಮಾಡಿದ್ದಾರೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದಕ್ಕಾಗಿ ಆಕೆಗೆ ನಾಲ್ಕೂವರೆ ದಶಕಗಳ ಸುದೀರ್ಘ ಜೈಲು ಶಿಕ್ಷೆ ವಿಧಿಸಿ ತೀರ್ಪಿತ್ತಿದೆ.