ಕೊಲಂಬೊ, ಸೆ 03 (DaijiworldNews/DB): ನನ್ನ ಆರೋಗ್ಯದಲ್ಲಿ ವ್ಯತ್ಯಯಗಳಾಗಿದ್ದು, ತುರ್ತು ವೈದ್ಯಕೀಯ ನೆರವು ಅಗತ್ಯವಾಗಿದೆಯೆಂದು ಕೋರಿ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿಯು ಶ್ರೀಲಂಕಾ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.
ಬಿಡದಿ ಧ್ಯಾನಪೀಠದ ಸ್ವಾಮಿ ನಿತ್ಯಾನಂದ ಸದ್ಯ ದೇಶ ತೊರೆದು ಈಕ್ವೆಡಾರ್ ದ್ವೀಪದಲ್ಲಿ ನೆಲೆಸಿದ್ದಾರೆಂದು ಹೇಳಲಾಗುತ್ತಿದೆ. ಇದೀಗ ಅವರ ಆರೋಗ್ಯದಲ್ಲಿ ಏರುಪೇರುಂಟಾಗಿದ್ದು, ದ್ವೀಪ ರಾಷ್ಟ್ರದಲ್ಲಿ ಅಗತ್ಯವಾಗಿ ಬೇಕಾದ ವೈದ್ಯಕೀಯ ಸೌಲಭ್ಯ ಸಿಗುತ್ತಿಲ್ಲವಂತೆ. ಹೀಗಾಗಿ ತುರ್ತು ವೈದ್ಯಕೀಯ ಸೇವೆ ಸಿಗದಿದ್ದರೆ ನನ್ನ ಜೀವಕ್ಕೆ ಅಪಾಯವಿದೆ. ಕೂಡಲೇ ಚಿಕಿತ್ಸೆಗಾಗಿ ವೈದ್ಯಕೀಯ ಅಗತ್ಯತೆ ಪೂರೈಸಬೇಕೆಂದು ಮನವಿ ಮಾಡಿ ಲಂಕಾ ಅಧ್ಯಕ್ಷ ರನಿಲ್ ವಿಕ್ರಮ ಸಿಂಘೆ ಅವರಿಗೆ ಪತ್ರ ಬರೆದಿದ್ದಾರೆ.
ಕಳೆದ ಆಗಸ್ಟ್ ತಿಂಗಳಲ್ಲಿ ನಿತ್ಯಾನಂದ ಈ ಬಗ್ಗೆ ಗಮನ ಸೆಳೆದಿದ್ದರು. ತನ್ನ ಹೊಸ ದ್ವೀಪ ರಾಷ್ಟ್ರದಲ್ಲಿ ವೈದ್ಯಕೀಯ ಸೌಲಭ್ಯಗಳ ಕೊರತೆ ಇದೆ ಎಂದಿದ್ದರು. ಇದೀಗ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಅವರು ವೈದ್ಯಕೀಯ ಸೇವೆಗಾಗಿ ಲಂಕಾವನ್ನು ಕೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.