ಢಾಕಾ, ಸೆ 27 (DaijiworldNews/HR): ಬಾಂಗ್ಲಾದೇಶದ ವಾಯವ್ಯ ಭಾಗದ ಪಂಚಗಡ ಜಿಲ್ಲೆಯ ಕೊರೊಟೊ ನದಿಯಲ್ಲಿ ಭಾನುವಾರ ಸಂಭವಿಸಿದ ದೋಣಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ.
ಶವಗಳನ್ನು ಮೇಲೆತ್ತುವ ಕೆಲಸ ನಡೆಯುತ್ತಿದ್ದು, ಇನ್ನೂ ಆರು ಜನರು ಕಾಣೆಯಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಇನ್ನು 70ಕ್ಕೂ ಹೆಚ್ಚು ಜನರನ್ನು ಕರೆದೊಯ್ಯುತ್ತಿದ್ದ ದೋಣಿ ಭಾನುವಾರ ಮಗುಚಿದ್ದು, ಇದೀಗ ಮೃತಪಟ್ಟವರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ.