ಇರಾನ್, ಅ 01 (DaijiworldNews/DB): ಸುನ್ನಿ ಸಮುದಾಯಕ್ಕೆ ಸೇರಿದ ಬಾಲಕಿ ಮೇಲೆ ಶಿಯಾ ಕಮಾಂಡರ್ವೊಬ್ಬ ಅತ್ಯಾಚಾರ ಎಸಗಿದ್ದು, ಘಟನೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಪೊಲೀಸರು ಗುಂಡಿಗೆ 36 ಮಂದಿ ಬಲಿಯಾಗಿದ್ದಾರೆ.
ಕಮಾಂಡರ್ ಇಬ್ರಾಹಿಂ ಖುಚಾಕಜಾಯಿ ಎಂಬಾತನೇ ಅ15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದವನು.
ಘಟನೆ ಖಂಡಿಸಿ ಇರಾನ್ನಲ್ಲಿ ಸುನ್ನಿ ಸಮುದಾಯದಿಂದ ಬೃಹತ್ ಪ್ರತಿಭಟನೆ ನಡೆದಿದೆ. ಈ ವೇಳೆ ಪ್ರತಿಭಟನಾಕಾರರು ಸರ್ಕಾರಿ ಕಚೇರಿ, ಪೊಲೀಸ್ ಠಾಣೆಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಲುವಾಗಿ ಪೊಲೀಸರು ಫೈರಿಂಗ್ ನಡೆಸಿದ್ದು, ಇದರಿಂದ 36 ಮಂದಿ ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿಯಿಂದಾಗಿ ಅನೇಕ ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.