ಟೊರಂಟೊ,ಅ 03 (DaijiworldNews/MS): ಕೆನಡಾದ ಬ್ರಾಂಪ್ಟನ್ ನಗರದಲ್ಲಿ ಇತ್ತೀಚೆಗಷ್ಟೇ ಅನಾವರಣಗೊಂಡ ಶ್ರೀ ಭಗವದ್ಗೀತೆ ಪಾರ್ಕ್ ಅನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಅಪರಾಧಿಗಳ ವಿರುದ್ದ ತನಿಖೆ ನಡೆಸಿ ತ್ವರಿತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಒತ್ತಾಯಿಸಿದೆ.
ನಗರದ ಮೇಯರ್ ಪ್ಯಾಟ್ರಿಕ್ ಬ್ರೌನ್ ಅವರು ಟ್ವಿಟರ್ನಲ್ಲಿ ಈ ಘಟನೆಯನ್ನು ಖಚಿತಪಡಿಸಿ ಕೃತ್ಯವನ್ನು ಖಂಡಿಸಿದ್ದಾರೆ. ಕೆನಡಾವು ಅಂತಹ ದಾಳಿಕೋರರ ವಿರುದ್ಧ ಶೂನ್ಯ ಸಹಿಷ್ಣುತೆ ಹೊಂದಿದೆ ಜತೆಗೆ ಇಂಥ ದ್ವೇಷಮಯ ಕೃತ್ಯದ ಬಗ್ಗೆ ತನಿಖೆ ನಡೆಸಲು ಆದೇಶ ನೀಡಿದ್ದಾರೆ.
ಈ ಹಿಂದೆ ಟ್ರಾಯರ್ಸ್ ಪಾರ್ಕ್ ಎಂದು ಕರೆಯಲ್ಪಡುತ್ತಿದ್ದ ಉದ್ಯಾನಕ್ಕೆ ಶ್ರೀ ಭಗವದ್ಗೀತಾ ಪಾರ್ಕ್ ಎಂದು ಮರುನಾಮಕರಣ ಮಾಡಿ,ಸೆಪ್ಟೆಂಬರ್ 28 ರಂದು ಲೋಕಾರ್ಪಣೆಗೊಳಿಸಲಾಗಿತ್ತು.
ಸೆಪ್ಟೆಂಬರ್ 15ರಂದು, ಕೆನಡಾದ ಪ್ರಮುಖ ಹಿಂದೂ ದೇವಾಲಯವಾದ ಬೋಚ ಸನ್ಯಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆಯ(ಬಿಎಪಿಎಸ್) ಸ್ವಾಮಿನಾರಾಯಣ ಮಂದಿರದ ಮೇಲೆ ಕೆನಡಿಯನ್ ಖಲಿಸ್ತಾನಿ ಉಗ್ರಗಾಮಿಗಳು ದಾಳಿ ಮಾಡಿದ್ದರು.