ಬಲೂಚಿಸ್ತಾನ, ಅ 15 (DaijiworldNews/HR): ಬಲೂಚಿಸ್ತಾನ್ ಹೈಕೋರ್ಟ್ನ ಮಾಜಿ ಮುಖ್ಯ ನ್ಯಾಯಮೂರ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಖರಾನ್ ಪ್ರದೇಶದಲ್ಲಿ ನಡೆದಿದೆ.
ಪ್ರಾರ್ಥನೆ ಸಲ್ಲಿಸಿ ಮಾಜಿ ಮುಖ್ಯ ನ್ಯಾಯಮೂರ್ತಿ ಮುಹಮ್ಮದ್ ನೂರ್ ಮಸ್ಕಂಜೈ ಅವರು ಮಸೀದಿಯ ಹೊರಗೆ ಬರುತ್ತಿದ್ದಂತೆ ಗುಂಡಿನ ದಾಳಿ ನಡೆದಿದ್ದು, ಗಂಭೀರ ಗಾಯಗೊಂಡ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಖರಾನ್ ನಗರದಿಂದ ಸುಮಾರು 280 ಕಿ.ಮೀ ದೂರದಲ್ಲಿರುವ ಕ್ವೆಟ್ಟಾದಲ್ಲಿರುವ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮಸ್ಕಂಜೈ ಸಾವನ್ನಪ್ಪಿದ್ದಾರೆ.
ಇನ್ನು ಗುಂಡಿನ ದಾಳಿಯಲ್ಲಿ ಮತ್ತಿಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸ್ ಉಪ ಮಹಾನಿರೀಕ್ಷಕ ನಜೀರ್ ಅಹ್ಮದ್ ಕುರ್ದ್ ತಿಳಿಸಿದ್ದಾರೆ.