ವಾಷಿಂಗ್ಟನ್, ಅ 28 (DaijiworldNews/HR): 44 ಶತಕೋಟಿ ಡಾಲರ್ ಗೆ ಟ್ವಿಟರ್ ಅನ್ನು ಖರೀದಿಸುವ ಪ್ರಕ್ರಿಯೆ ಪೂರ್ಣಗೊಳಿಸುವ ಮೂಲಕ ಟ್ವಿಟರ್ ಅನ್ನು ಉದ್ಯಮಿ ಎಲಾನ್ ಮಸ್ಕ್ ಅವರು ತನ್ನ ಸುಪರ್ತಿಗೆ ತೆಗೆದುಕೊಂಡಿದ್ದಾರೆ.
ಎಲೋನ್ ಮಸ್ಕ್ ಮಾಲೀಕರಾದ ಬೆನ್ನಲ್ಲೇ ಟ್ವಿಟರ್ ಸಿಇಒ ಪರಾಗ್ ಅಗರ್ವಾಲ್ ಮತ್ತು ಸಿಎಫ್ಒ ನೆಡ್ ಸೆಗಲ್ ಅವರನ್ನು ಕಂಪನಿಯಿಂದ ವಜಾಗೊಳಿಸಲಾಗಿದೆ.
ಇನ್ನು ಮಸ್ಕ್ ಅವರು ಟ್ವಿಟರ್ ಖರೀದಿ ಪ್ರಸ್ತಾವದಿಂದ ಹಿಂದೆ ಸರಿಯಲು ಯತ್ನಿಸಿದಾಗ ಅಗರ್ವಾಲ್ ಅವರು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯದಲ್ಲಿ ಹಿನ್ನಡೆಯಾಗಬಹುದು ಎಂಬ ಭೀತಿಯಿಂದ ಮಸ್ಕ್ ಟ್ವಿಟರ್ ಖರೀದಿ ಪ್ರಕ್ರಿಯೆ ಪೂರ್ಣಗೊಳಿಸಿದರು.
ಟ್ವಿಟರ್ನಲ್ಲಿ ನಕಲಿ ಖಾತೆಗಳಿಗೆ ಕಡಿವಾಣ ಹಾಕಬೇಕಿದೆ. ಸಾರ್ವಜನಿಕವಾಗಿ ಯಾವುದೇ ಪೋಸ್ಟ್ಗಳು ಹೇಗೆ ಕಾಣಿಸುತ್ತವೆ' ಎಂಬದನ್ನು ಪತ್ತೆ ಮಾಡಲು ಟ್ವಿಟರ್ನ ವ್ಯವಸ್ಥೆಗಳನ್ನು ಮಾರ್ಪಡಿಸಬೇಕು ಎಂದು ಮಸ್ಕ್ ಹೇಳಿದ್ದಾರೆ.