ಇಸ್ರೇಲ್, ನ 04 (DaijiworldNews/HR): ಸಾರ್ವತ್ರಿಕ ಚುನಾವಣೆಯಲ್ಲಿ ಇಸ್ರೇಲ್ ಪ್ರಧಾನಿಯಾಗಿ ಬೆಂಜಮಿನ್ ನೆತನ್ಯಾಹು ಅವರು ಗೆಲುವು ಸಾಧಿಸಿದ್ದು, ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
ಇಸ್ರೇಲ್ನ ಮಾಜಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಒಕ್ಕೂಟವು 120 ಸ್ಥಾನಗಳ ಸಂಸತ್ತಿನಲ್ಲಿ ಬಹುಪಾಲು ಸ್ಥಾನಗಳನ್ನು ಗೆದ್ದಿದ್ದು, ಒಕ್ಕೂಟವು ಗೆದ್ದಿರುವ 120 ಸ್ಥಾನಗಳ ಸಂಸತ್ತಿನಲ್ಲಿ 64 ಸ್ಥಾನಗಳಲ್ಲಿ 32 ಸ್ಥಾನಗಳು ನೆತನ್ಯಾಹು ಅವರ ಪಕ್ಷದ್ದಾಗಿದೆ.
ಪ್ರಧಾನಿ ನರೇಂದ್ರ ಮೋದಿಯಿಂದ ಅಭಿನಂದನೆ
ಇಸ್ರೇಲ್ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದ ಬೆಂಜಮಿನ್ ನೆತನ್ಯಾಹು ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದು, ಭಾರತ ಮತ್ತು ಇಸ್ರೇಲ್ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಗಾಢಗೊಳಿಸಲು ನಮ್ಮ ಜಂಟಿ ಪ್ರಯತ್ನಗಳನ್ನು ಮುಂದುವರಿಸಲು ನಾನು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.