ಕಠ್ಮಂಡು,ಫೆ 27 (MSP): ನೇಪಾಳದ ಪ್ರವಾಸೋದ್ಯಮ ಸಚಿವ ರಬೀಂದ್ರಾ ಹಾಗೂ ಅವರನ್ನು ಒಳಗೊಂಡಂತೆ ಏಳು ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನವಾಗಿದೆ. ಬುಧವಾರ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಇದರಲ್ಲಿದ್ದ ಏಳು ಮಂದಿ ಸಾವನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ನೇಪಾಳದ ಟೆಹ್ರಾಥೂಮ್ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ ಎಂದು ನೇಪಾಳದ ನಾಗರಿಕ ವಿಮಾನಯಾನ ಸಂಸ್ಥೆ ತಿಳಿಸಿದ್ದಾರೆ.
ಪ್ರವಾಸೋದ್ಯಮ ಸಚಿವ ರಬೀಂದ್ರಾ ಅವರು ತಮ್ಮ ಅಧಿಕಾರಿಗಳ ಜತೆ ಚುಹಾನ್ ದಾಂಡಾ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ ಎಂದು ವರದಿ ವಿವರಿಸಿದೆ.
ಘಟನಾ ಸ್ಥಳಕ್ಕೆ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಸಚಿವ ಸಂಪುಟದ ತುರ್ತು ಸಭೆ ಕರೆಯಲಾಗಿದ್ದು ತನಿಖೆಗೆ ಆದೇಶ ನೀಡಿದ್ದಾರೆ.