ಪೇಶಾವರ, ಜ 30( DaijiworldNews/MS): ಪಾಕಿಸ್ತಾನದ ಪೇಶಾವರದಲ್ಲಿರುವ ಪೊಲೀಸ್ ಪ್ರಧಾನ ಕಚೇರಿಯೊಳಗಿನ ಮಸೀದಿಯಲ್ಲಿ ನಡೆದ ಸ್ಫೋಟದಲ್ಲಿ 25 ಜನರು ಸಾವನ್ನಪ್ಪಿದ್ದು, 120 ಮಂದಿ ಗಾಯಗೊಂಡಿದ್ದಾರೆ.
ಅಫ್ಘಾನಿಸ್ತಾನದ ಗಡಿಗೆ ಸಮೀಪವಿರುವ ವಾಯುವ್ಯ ನಗರ ಪೇಶಾವರದಲ್ಲಿ ಮಧ್ಯಾಹ್ನದ ಪ್ರಾರ್ಥನೆಯ ವೇಳೆ ಈ ಘಟನೆ ನಡೆದಿದೆ.ಸ್ಪೋಟದ ತೀವ್ರತೆಗೆ ಮಸೀದಿಯ ಮೇಲ್ಛಾವಣಿ, ಒಂದು ಭಾಗದ ಗೋಡೆ ಕುಸಿದು ಬಿದ್ದಿದೆ ಎನ್ನಲಾಗಿದೆ ಎಂದು ಪೊಲೀಸ್ ಅಧಿಕಾರಿ ಸಿಕಂದರ್ ಖಾನ್ ತಿಳಿಸಿದ್ದಾರೆ.
ಗಾಯಗೊಂಡವರನ್ನು ಪೇಶಾವರದ ಲೇಡಿ ರೀಡಿಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಕಾರಣವನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.ಸ್ಥಳದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ.