ವಾಷಿಂಗ್ಟನ್, ಮಾ 18(DaijiworldNews/MS): ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಫೇಸ್ಬುಕ್ ಮತ್ತು ಯೂಟ್ಯೂಬ್ ಖಾತೆ ಮೇಲಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.
ಈ ಹಿನ್ನಲೆಯಲ್ಲಿ ಶುಕ್ರವಾರದಂದು, ಯೂಟ್ಯೂಬ್ ಮತ್ತು ಫೇಸ್ಬುಕ್ನಲ್ಲಿ ಮಾಡಿದ ಮೊದಲ ಪೋಸ್ಟ್ನಲ್ಲಿ ಟ್ರಂಪ್ ‘I'M BACK!’ ಎಂದು ಬರೆದುಕೊಂಡಿದ್ದಾರೆ.
ಜನವರಿ 6,2021ರಂದು ಅಮೆರಿಕದ ಕ್ಯಾಪಿಟಲ್ ಕಟ್ಟಡದ ಮೇಲೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲಿಗರ ದಾಳಿ ಬಳಿಕ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಟ್ರಂಪ್ ತಮ್ಮ ಬೆಂಬಲಿಗರನ್ನು ಹಿಂಸೆಗೆ ಪ್ರಚೋದಿಸುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಟ್ರಂಪ್ ಅವರ ಫೇಸ್ಬುಕ್ ಮತ್ತು ಯೂಟ್ಯೂಬ್ ಖಾತೆಗೆ ನಿರ್ಬಂಧ ಹೇರಲಾಗಿತ್ತು.
ಟ್ರಂಪ್ ಅವರು ವಿಡಿಯೋ ಭಾಷಣದ ತುಣಕೊಂದುನ್ನು ಪೋಸ್ಟ್ ಮಾಡಿದ್ದು, ಕಾಯುವಂತೆ ಮಾಡಿರುವುದಕ್ಕೆ ಕ್ಷಮೆ ಇರಲಿ ಎಂದಿದ್ದಾರೆ.