ಪ್ಯಾರೀಸ್, ಏ 11 (DaijiworldNews/HR): 2027-28ರ ವೇಳೆಗೆ ಭಾರತವು ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ಫ್ರಾನ್ಸ್ನಲ್ಲಿರುವ ಭಾರತೀಯ ವಲಸಿಗ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗ ನಾವು 5 ನೇ ಅತಿದೊಡ್ಡ ಆರ್ಥಿಕತೆಯಾಗಿದ್ದೇವೆ. 2027-28 ರ ಹೊತ್ತಿಗೆ ನಾವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುತ್ತೇವೆ ಎಂದರು.
ಭಾರತವು ಇಂದು 3.5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿದೆ ಮತ್ತು 2047 ರ ವೇಳೆಗೆ ನಾವು ಆಚರಿಸುವಾಗ 30-35 ಡಾಲರ್ ಟ್ರಿಲಿಯನ್ ಆರ್ಥಿಕತೆಯಾಗಲಿದೆ ಎಂದಿದ್ದಾರೆ.
ಇನ್ನು ಸ್ವಾತಂತ್ರ್ಯದ 75 ನೇ ವರ್ಷದಲ್ಲಿ ನಾವು ರಫ್ತುಗಳಲ್ಲಿ USD 750 ಶತಕೋಟಿ ದಾಟಿದ್ದೇವೆ' ಎಂದು ಹೇಳಿದ್ದಾರೆ.