ಡಾಕಾ, ಏ 24 (DaijiworldNews/MS): ಮಾಜಿ ನ್ಯಾಯಾಧೀಶರು ಮತ್ತು ಸ್ವಾತಂತ್ರ್ಯ ಹೋರಾಟಗಾರ, ಹಿರಿಯ ರಾಜಕಾರಣಿ ಮೊಹಮ್ಮದ್ ಶಹಾಬುದ್ದೀನ್ ಅವರು ಬಾಂಗ್ಲಾದೇಶದ 22 ನೇ ಅಧ್ಯಕ್ಷರಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.
ಬಂಗಬಾಬನ್ನ ಐತಿಹಾಸಿಕ ದರ್ಬಾರ್ ಹಾಲ್ನಲ್ಲಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅವರು 73 ವರ್ಷದ ಶಹಾಬುದ್ದೀನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಧಾನಿ ಹಸೀನಾ ಮತ್ತು ನೂತನ ಅಧ್ಯಕ್ಷರ ಕುಟುಂಬ ಸದಸ್ಯರು, ರಾಜಕಾರಣಿಗಳು, ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮತ್ತು ಹಿರಿಯ ಸಿವಿಲ್ ಮತ್ತು ಮಿಲಿಟರಿ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬಾಂಗ್ಲಾದೇಶದ ಸುದೀರ್ಘ ಅವಧಿಯ ಅಧ್ಯಕ್ಷರಾಗಿರುವ ಹಮೀದ್ ಅವರ ಅಧಿಕಾರಾವಧಿಯು ಏಪ್ರಿಲ್ 23 ರಂದು ಕೊನೆಗೊಂಡಿದೆ.
ಈ ವರ್ಷದ ಫೆಬ್ರವರಿಯಲ್ಲಿ ಆಡಳಿತಾರೂಢ ಅವಾಮಿ ಲೀಗ್ನ ಅಭ್ಯರ್ಥಿಯಾಗಿ ಶಹಾಬುದ್ದೀನ್ಅವರು ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.