ಸಿಯೋಲ್, ಮೇ 27(DaijiworldNews/KH): ದಕ್ಷಿಣ ಕೊರಿಯಾದ ಡಾಯೆಗು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದ ವಿಮಾನವೊಂದು ಪ್ರಯಾಣಿಕ ಲ್ಯಾಂಡಿಂಗ್ಗೆ ಮುಂಚೆಯೇ ತುರ್ತುದ್ವಾರ ತೆರೆದಿದ್ದು ಇದರಿಂದ 9 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ವರದಿಯಾಗಿದೆ.
200 ಪ್ರಯಾಣಿಕರನ್ನು ಏಷಿಯಾನಾ ಏರ್ಲೈನ್ಸ್ನ ವಿಮಾನವೊಂದು ಹೊತ್ತು ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದ ವೇಳೆ ಲ್ಯಾಂಡಿಂಗ್ ಇನ್ನೂ 200 ಮೀಟರ್ (650 ಅಡಿ) ಎತ್ತರವಿರುವಾಗಲೇ ಪ್ರಯಾಣಿಕರೊಬ್ಬರು ತುರ್ತು ದ್ವಾರ ತೆರೆದಿದ್ದು, ಇದರಿಂದ ಗಾಳಿ ವಿಮಾನದ ಒಳನುಗ್ಗಿದ ರಭಸಕ್ಕೆ 9 ಪ್ರಯಾಣಿಕರಿಗೆ ಉಸಿರಾಟದ ಸಮಸ್ಯೆಯಾಗಿದೆ.
ಇನ್ನೂ, ಯಾವುದೇ ಅಪಾಯವಿಲ್ಲದಂತೆ ವಿಮಾನ ಲ್ಯಾಂಡ್ ಆಗಿದೆ. ಸಮಸ್ಯೆಯಾದ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು , ತುರ್ತುದ್ವಾರ ತೆರೆದ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ವ್ಯಕ್ತಿ ದ್ವಾರ ತೆರೆದಿದ್ದಕ್ಕೆ ಕಾರಣವೇನೆಂದು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.