ಮಡಗಾಸ್ಕರ್, ಆ 26 (DaijiworldNews/MS): ಮಡಗಾಸ್ಕರ್ನ ರಾಜಧಾನಿ ಅಂಟಾನಾನರಿವೊದಲ್ಲಿನ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು , ಆ ಪೈಕಿ 11 ಮಂದಿ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಹಿಂದೂ ಮಹಾಸಾಗರ ದ್ವೀಪ ಕ್ರೀಡಾಕೂಟದ ಉದ್ಘಾಟನಾ ಸಮಾರಂಭಕ್ಕಾಗಿ 50,000 ಜನರು ಕ್ರೀಡಾಂಗಣಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ವೇಳೆ ಕಾಲ್ತುಳಿತ ಉಂಟಾಗಿದೆ.
ಮಡಗಾಸ್ಕರ್ ಪ್ರಧಾನಿ ಕ್ರಿಶ್ಚಿಯನ್ ನಟ್ಸೆ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಕಾಲ್ತುಳಿತ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದು, ಬಳಿಕ ಕಾಲ್ತುಳಿತದಲ್ಲಿ ಮೃತಪಟ್ಟವರ ದೇಹಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತಪಟ್ಟವರ ಗುರುತು ಪತ್ತೆ ಕಾರ್ಯವನ್ನು ಸ್ಥಳೀಯ ಪೊಲೀಸರು ಕೈಗೊಂಡಿದ್ದಾರೆ. ಸುಮಾರು 80ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಗೊಂಡಿದ್ದವರ ಪೈಕಿ 11 ಜನರ ಸ್ಥಿತಿ ಚಿಂತಾಜನಕವಾಗಿದೆ.