ಲಿಬಿಯಾ, ಸೆ 12 (DaijiworldNews/MS): ಉತ್ತರ ಆಫ್ರಿಕಾದ ಲಿಬಿಯಾದಲ್ಲಿ ದೊಡ್ಡ ದುರಂತವೊಂದು ನಡೆದಿದೆ. ಭಾರೀ ಮಳೆ ಮತ್ತು ಪ್ರವಾಹದಿಂದ 2,000 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಲಿಬಿಯಾ ದೇಶದ ಪ್ರಧಾನಿ ಒಸಾಮಾ ಹಮದ್ ತಿಳಿಸಿದ್ದಾರೆ.
ಸುಮಾರು 5-6 ಸಾವಿರ ಜನರು ನಾಪತ್ತೆಯಾಗಿದ್ದಾರೆ. ಮೆಡಿಟರೇನಿಯನ್ ಸಮುದ್ರದಲ್ಲಿ ಡೇನಿಯಲ್ ಚಂಡಮಾರುತವು ಈ ಅನಾಹುತಕ್ಕೆ ಕಾರಣವಾಗಿದೆ. ಪ್ರಮುಖವಾಗಿ 'ಡೆರ್ನಾ' ನಗರದ ಬಳಿ ಜಲಾಶಯಗಳು ಹೆಚ್ಚಾಗಿದ್ದು, ಭಾರೀ ಪ್ರವಾಹ ಉಂಟಾಗಿ ಹೆಚ್ಚಿನ ಸಂಖ್ಯೆಯ ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಘಟನೆಯ ಹಿನ್ನಲೆಯಲ್ಲಿ ಪ್ರಧಾನಿ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದರು.