ಒಸ್ಲೋ (ನಾರ್ವೆ) ಅ 06 (DaijiworldNews/MS): ಇರಾನ್ ನರ್ಗೆಸ್ ಮೊಹಮ್ಮದಿ ಅವರಿಗೆ 2023ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ.
ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧದ ಹೋರಾಟ ಮತ್ತು ಎಲ್ಲರಿಗೂ ಮಾನವ ಹಕ್ಕುಗಳನ್ನು ನೀಡಬೇಕು ಎಂದು ಹೋರಾಟ ಮಾಡಿದ ದಿಟ್ಟ ಮಹಿಳೆಗೆ ಈ ಗೌರವ ನೀಡಲಾಗಿದೆ. ಇರಾನ್ನಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ದಬ್ಬಾಳಿಕೆಯ ವಿರುದ್ಧದ ಹೋರಾಟ ಮತ್ತು ಸಮಾನ ಮಾನವ ಹಕ್ಕುಗಳು, ಸ್ವಾತಂತ್ರ್ಯವನ್ನು ಉತ್ತೇಜಿಸುವ ಇವರ ಅವಿರತ ಹೋರಾಟಕ್ಕಾಗಿ ಈ ಪ್ರಶಸ್ತಿ ನೀಡಲಾಗಿದೆ. ನರ್ಗಿಸ್ ಮೊಹಮ್ಮದಿ ಅವರು ಸದ್ಯ ಇರಾನ್ನಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.
ನೊಬೆಲ್ ಪ್ರಶಸ್ತಿಯನ್ನು ಪಡೆದ 19ನೇ ಮಹಿಳೆ ನರ್ಗೆಸ್ ಮೊಹಮ್ಮದಿ. 2021ರಲ್ಲಿ ರಷ್ಯಾದ ಡಿಮಿಟ್ರಿ ಮುರಾಟೊವ್ ಈ ಪ್ರಶಸ್ತಿಯನ್ನು ಪಡೆದಿದ್ದರು.