ಚೀನಾ, ನ 16 (DaijiworldNews/RA): ಚೀನಾದ ಕಲ್ಲಿದ್ದಲು ಕಂಪನಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು ದುರಂತದಲ್ಲಿ ಒಟ್ಟು 11 ಮಂದಿ ಸಾವನ್ನಪ್ಪಿ 51 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಉತ್ತರ ಚೀನಾದ ಶಾಂಕ್ಸಿ ಪ್ರಾಂತ್ಯದ ಲುಲಿಯಾಂಗ್ ನಗರದ ಲಿಶಿ ಜಿಲ್ಲೆಯಲ್ಲಿರುವ ಯೋಂಗ್ಜು ಕಲ್ಲಿದ್ದಲು ಕಂಪನಿಗೆ ಸೇರಿದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ
ಇಂದು ಬೆಳಗ್ಗೆ ಸುಮಾರು 6.40ಕ್ಕೆ ಈ ಅಗ್ನಿ ಅವಘಡ ಸಂಭವಿಸಿದೆ ಅಲ್ಲಿನ ಮಾಧ್ಯಮಗಳು ಮಾಹಿತಿ ನೀಡಿವೆ.
ಇಲ್ಲಿಯವರೆಗೆ ದುರಂತ ನಡೆದ ಕಟ್ಟಡದಿಂದ ಒಟ್ಟು 63 ಜನರನ್ನು ಹೊರಗೆ ಕರೆದುಕೊಂಡು ಬರಲಾಗಿದೆ .ಗಾಯಾಳುಗಳನ್ನು ಲುಲಿಯಾಂಗ್ ಫಸ್ಟ್ ಪೀಪಲ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನು ಈ ಘಟನೆಯ ವಿಡಿಯೋವನ್ನು ಚೀನಾದ Weibo ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ. ಈ ವಿಡಿಯೋದಲ್ಲಿ ದೊಡ್ಡ ಮಟ್ಟದ ಬೆಂಕಿ ಕಟ್ಟಡದಲ್ಲಿ ಕಾಣಿಸಿಕೊಂಡಿದೆ. ದಟ್ಟವಾದ ಕಪ್ಪು ಹೊಗೆ ಹೊರ ಹೊಮ್ಮುತ್ತಿರುವುದು ಈ ವಿಡಿಯೋದಲ್ಲಿ ಕಂಡು ಬಂದಿದೆ. ಘಟನಾ ಸ್ಥಳಕ್ಕೆ ಚೀನಾದ ಅಗ್ನಿಶಾಮಕ ದಳ ಧಾವಿಸಿ ಬೆಂಕಿ ನಂದಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.