ಕೊಲಂಬೊ, ಡಿ 25 (DaijiworldNews/MR): ಶ್ರೀಲಂಕಾ ಸರ್ಕಾರವು ಡ್ರಗ್ಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಪೊಲೀಸರ ತನಿಖೆಯ ಪ್ರಕಾರ ಕೇವಲ ಒಂದು ವಾರದಲ್ಲಿ ಈಗಾಗಲೇ ಸುಮಾರು 14,000 ಮಾದಕ ವ್ಯಸನಿಗಳನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.
ಡಿ. 17 ರಿಂದ 24 ರವರೆಗೆ ಈ ಕಾರ್ಯಾಚರಣೆಯನ್ನು ನಡೆಸಿರುವ ಪೊಲೀಸರು 13,666 ಶಂಕಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಷ್ಟೇ ಅಲ್ಲದೇ 717 ಇತರ ಜನರನ್ನು ಸಹ ತನಿಖೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಬಂಧಿತರ ಪೈಕಿ ಸುಮಾರು 174 ಮಂದಿ ಅಕ್ರಮ ಹಣ ಆಸ್ತಿಗಳಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇತರರಿಗೆ ಸಂಬಂಧಿಸಿದಂತೆ, ಅಧಿಕೃತ ಮೂಲಗಳ ಪ್ರಕಾರ ಸುಮಾರು 1,097 ಮಾದಕ ವ್ಯಸನಿಗಳನ್ನು ಪುನರ್ವಸತಿ ಕೇಂದ್ರಗಳಿಗೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ.