ಟೋಕಿಯೊ, ಜ 02 (DaijiworldNews/HR): ಜಪಾನ್ ಸರಣಿ ಭೂಕಂಪಗಳಿಂದ ನಲುಗಿ ಹೋಗಿದ್ದು, ಸೋಮವಾರದಿಂದ ಇಂದಿನವರೆಗೆ 155 ಭೂಕಂಪಗಳು ಸಂಭವಿಸಿವೆ ಎಂದು ಜಪಾನ್ ಹವಾಮಾನ ಇಲಾಖೆ ತಿಳಿಸಿದೆ.
ಸೋಮವಾರದ 7.6 ಮತ್ತು 6 ತೀವ್ರತೆಯ ಎರಡು ಪ್ರಬಲ ಭೂಕಂಪಗಳೂ ಸಂಭವಿಸಿದ್ದು, ಭೂಕಂಪನದಿಂದ ಕನಿಷ್ಠ 12 ಮಂದಿ ಮೃತಪಟ್ಟಿರುವುದಾಗಿ ವರದಿ ತಿಳಿಸಿದೆ.
ಇನ್ನು ಭೂಕಂಪದ ತೀವ್ರತೆಗೆ ಸಮುದ್ರದಲ್ಲಿ ಸುನಾಮಿ ಭೀತಿ ಆವರಿಸಿದ್ದು ದೊಡ್ಡ ದೊಡ್ಡ ಅಲೆಗಳ ಹೊಡೆತಕ್ಕೆ ಅನೇಕ ಮನೆಗಳು ನೆಲಸಮವಾಗಿದೆ ಎಂದು ಅಧಿಕಾರಿಗಳು ತಿಳಿದ್ದಾರೆ.