ಅಮೆರಿಕ, ಜ 04 (DaijiworldNews/HR): ಅಮೇರಿಕಾದ ನೆವಾಡಾ ಕೋರ್ಟ್ ರೂಂನಲ್ಲಿ ಅಪರಾಧಿಯೊಬ್ಬ ನ್ಯಾಯಧೀಶೆಯ ಮೇಲೆ ದಾಳಿ ಮಾಡಿರುವ ಘಟನೆ ನಡೆದಿದೆ.
ಆರೋಪಿಯನ್ನು ಡಿಯೋಬ್ರಾ ರೆಡ್ಡೆನ್ (30) ಎಂದು ಗುರುತಿಸಲಾಗಿದೆ.
ಬುಧವಾರ ಬೆಳಿಗ್ಗೆ ಅಪರಾಧಿಯನ್ನು ನ್ಯಾಯಲಯದ ಮುಂದೆ ಹಾಜರುಪಡಿಸಲಾಗಿದ್ದು, ಆತನ ಮೇಲಿರುವ ಆರೋಪದ ಬಗ್ಗೆ ವಿಚಾರಣೆ ನಡೆಸಬೇಕಾದರೆ ಈ ಘಟನೆ ನಡೆದಿದೆ.
ಇನ್ನು ಈ ಅಪರಾಧಿ ಮೇಲೆ ಅನೇಕ ಪ್ರಕರಣಗಳಿದ್ದು, ಈಗಾಗಲೇ ಶಿಕ್ಷೆಯನ್ನು ಅನುಭವಿಸಿದ್ದಾನೆ. ಬ್ಯಾಟರಿ ದಂಧೆಗೆ ಸಂಬಂಧಿಸಿದಂತೆ ಆತನನ್ನು ಬಂಧಿಸಿ ಬುಧವಾರ ಕೋರ್ಟ್ ಮುಂದೆ ಹಾಜರುಪಡಿಸಿದಲಾಗಿದೆ. ವಿಚಾರಣೆ ಸಮಯದಲ್ಲಿ ನ್ಯಾಯಧೀಶರ ಟೆಬಲ್ ಮೇಲೆ ಹಾರಿ ನ್ಯಾಯಧೀಶೆ ಮೇರಿ ಕೇ ಹೋಲ್ತಸ್ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ.