ನವದೆಹಲಿ, ಜ 09 (DaijiworldNews/HR): ನರೇಂದ್ರ ಮೋದಿಯನ್ನು ಟೀಕಿಸಿದ್ದ ಮಾಲ್ಡೀವ್ಸ್ ಸರ್ಕಾರದ ಅಧ್ಯಕ್ಷ ಮೊಹಮ್ಮದ್ ಮಿಜು ಇದೀಗ ಭಾರತಕ್ಕೆ ಬರಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ನರೇಂದ್ರ ಮೋದಿಯನ್ನು ಟೀಕಿಸಿದ್ದ ಮಾಲ್ಡೀವ್ಸ್ ಸರ್ಕಾರದ ವಿರುದ್ದ ಮಾಲ್ಡೀವ್ಸ್ ಜನರೇ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಅಧ್ಯಕ್ಷ ಮೊಹಮ್ಮದ್ ಮಿಜು ನೇತೃತ್ವದ ಸರ್ಕಾರ ಮೂವರು ಸಚಿವರನ್ನು ಅಮಾನತು ಮಾಡಿದ್ದಾರೆ,
ಇದೀಗ ಮೊಹಮ್ಮದ್ ಮಿಜು ವಿರುದ್ಧ ವಿಪಕ್ಷ ಅವಿಶ್ವಾಸ ನಿರ್ಣಯವನ್ನು ಮಂಡಿಸಲು ಮುಂದಾಗಿವೆ ಎಂದು ವರದಿಯಾಗಿದ್ದು, ಇದರ ಬೆನ್ನಲ್ಲೇ ಮೊಹಮ್ಮದ್ ಮಿಜು ಭಾರತ ಪ್ರವಾಸ ಕೈಗೊಳ್ಳಲು ಮುಂದಾಗಿದ್ದಾರೆ.