ಇಸ್ಲಾಮಾಬಾದ್, ಜ 18 (DaijiworldNews/AK): ಬಲೂಚಿಸ್ತಾನದಲ್ಲಿ ಇರಾನ್ನ ಮಾರಣಾಂತಿಕ ಕ್ಷಿಪಣಿ ಮತ್ತು ಡ್ರೋನ್ ದಾಳಿ ಬಳಿಕ ಪಾಕಿಸ್ತಾನವು ಇರಾನ್ ಪ್ರದೇಶದೊಳಗಿನ ಉಗ್ರಗಾಮಿ ಮೇಲೆ ವೈಮಾನಿಕ ದಾಳಿಯನ್ನು ನಡೆಸಿದೆ. ಒಂದು ದಿನದ ಬಳಿಕ ಇರಾನ್ನಲ್ಲಿರುವ ಭಯೋತ್ಪಾದಕರ ನೆಲೆಗಳ ಮೇಲೆ ಪಾಕಿಸ್ತಾನ ದಾಳಿ ಮಾಡಿದೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿದೆ.
ಇರಾನ್ನಲ್ಲಿರುವ ಬಿಎಲ್ಎ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ಈ ದಾಳಿಗಳನ್ನು ನಡೆಸಲಾಗಿದೆ. ಬಲೂಚಿಸ್ತಾನ್ ಲಿಬರೇಶನ್ ಆರ್ಮಿ, ಬಲೂಚಿಸ್ತಾನ್ ಲಿಬರೇಶನ್ ಫೋರ್ಸ್, ಬಲೂಚ್ ಪ್ರತ್ಯೇ ಕತಾವಾದಿ ಉಗ್ರಗಾಮಿ ಗುಂಪುಗಳು ಇರಾನ್ನಲ್ಲಿ ಸಕ್ರಿಯವಾಗಿವೆ, ಇದು ಪಾಕಿಸ್ತಾನ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ.
ಬಲೂಚಿಸ್ತಾನ್ ಲಿಬರೇಶನ್ ಫ್ರಂ ಟ್ ಮತ್ತು ಬಲೂಚಿಸ್ತಾನ್ ಲಿಬರೇಶನ್ ಆರ್ಮಿ ಇರಾನ್ನಲ್ಲಿ ನೆಲೆಸಿದ್ದ ಸಂದರ್ಭದಲ್ಲಿ ಪಾಕಿಸ್ತಾನದ ವಿರುದ್ಧ ಪಿತೂರಿ ಮತ್ತು ದಾಳಿಗಳನ್ನು ನಡೆಸುತ್ತಿರುತ್ತದೆ ಎಂದು ಪಾಕ್ ಹೇಳಿಕೊಂಡಿದೆ.
ಇರಾನ್ ಅಂತಹ ಸಂಘಟನೆಗಳಿಗೆ ಆಶ್ರಯ ನೀಡುವ ಮೂಲಕ ಸಹಾಯ ಮಾಡುತ್ತದೆ ಎಂದು ಹೇಳಿದೆ.ಪಾಕಿಸ್ತಾನದ ನೈಋತ್ಯ ಬಲೂಚಿಸ್ತಾನ್ ಪ್ರಾಂ ತ್ಯದಲ್ಲಿರುವ ಜೈಶ್ ಅಲ್-ಅಡ್ಲ್ ಗುಂಪಿನ ಪ್ರಧಾನ ಕಛೇರಿಯ ಮೇಲೆ ಇರಾನ್ ಮಂಗಳವಾರ ಕ್ಷಿಪಣಿ ಮತ್ತು ಡ್ರೋ ನ್ ಮೂಲಕ ದಾಳಿ ಮಾಡಿತು.
ಇದು ನಮ್ಮ ದೇಶದ ಭದ್ರತೆಯ ವಿರುದ್ಧದ ಆಕ್ರಮಣಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ತೆಗೆದುಕೊಂಡ ಮತ್ತೊಂದು ನಿರ್ಣಾಯಕ ಹೆಜ್ಜೆ ಎಂದು ಕರೆದಿದೆ.ಇದಕ್ಕೂ ಮುನ್ನ ಪಾಕಿಸ್ತಾನದಲ್ಲಿರುವ ಭಯೋತ್ಪಾದಕರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಇರಾನ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದರು.
ಈ ದಾಳಿಯ ನಂತರ ಇರಾನ್ ಮತ್ತು ಪಾಕಿಸ್ತಾನದ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಉಂಟಾಗಿದೆ. ಪಾಕಿಸ್ತಾನ ಬುಧವಾರ ಇರಾನ್ ರಾಯಭಾರಿಯನ್ನು ದೇಶದಿಂದ ಹೊರಹಾಕಿದೆ. ಅಲ್ಲದೆ ಟೆಹ್ರಾನ್ನಿಂದ ತನ್ನ ರಾಯಭಾರಿಯನ್ನು ವಾಪಸ್ ಕರೆಸಿಕೊಂಡಿದೆ ಎನ್ನಲಾಗಿದೆ.